ಹಾವೇರಿ: ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನು 3 ರೂ. ಹಾಗೂ ಡೀಸೆಲ್ ಬೆಲೆಯನ್ನು 3.50 ರೂ.ಗೆ ಏರಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಹಾವೇರಿ ಜಿಲ್ಲಾ ಘಟಕದ ವತಿಯಿಂದ ಜೂ.18ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಜಿಲ್ಲಾ ಕಾರ್ಯಾಲಯದಿಂದ ಹೊಸಮನಿ ಸಿದ್ದಪ್ಪ ಸರ್ಕಲ್‌ವರೆಗೆ ಪಾದಯಾತ್ರೆಯಲ್ಲಿ ತೆರೆಳಿ ಪತ್ರಿಭಟನೆ ನಡೆಸಲಾಗುವುದು. ನಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ಪಕ್ಷದ ಸಂಸದರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.