ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಹಾವೇರಿ ನಗರದಲ್ಲಿ ಬಿಜೆಪಿ ವತಿಯಿಂದ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಕಿರಣ ಕೋಣನವರ, ನೀಲಪ್ಪ ಪಿ.ಚಾವಡಿ, ಇತರರಿದ್ದರು.