ರಕ್ತದಾನ ಶಿಬಿರ ಆ.19ರಂದು

Published on

ಹಾವೇರಿ: ನಗರದ ಹೊಸಮಠದ ಬಸವೇಶ್ವರ ಸಮುದಾಯ ಭವನದಲ್ಲಿ ಆ.19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ರೆಡ್‌ಕ್ರಾಸ್, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ(ಬಿ,ಇಡಿ)ಕಾಲೇಜ್ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ರಕ್ತ ನೀಡಿ, ಭರವಸೆ ನೀಡಿ, ಜೀವ ಉಳಿಸೋಣ ಎಂಬ ಘೋಷವಾಕ್ಯದೊಂದಿಗೆ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜೀವ ಉಳಿಸುವ ಕಾರ್ಯ ಮಾಡಬೇಕು ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಪ್ರಕಟಣೆ ಮೂಲಕ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net