ಹಾವೇರಿ: ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದ್ವಾರಕೀಶ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಹಾಗೂ ನಾಡಿಗೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದರು.
ದ್ವಾರಕೀಶ ಅವರು ಸಿನಿಮಾ ರಂಗದಲ್ಲಿ ಹೊಸತನ ತಂದವರು. ಕಲೆಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ತಮ್ಮ ಬದುಕಿನಲ್ಲಿ ಏನೇ ಕಷ್ಟ ಇದ್ದರೂ ಜನರನ್ನು ನಗಿಸುವ ಕೆಲಸ ಮಾಡಿದ್ದಾರೆ. ಸಿನಿಮಾ ರಂಗದಲ್ಲಿ ಯಶಸ್ಸು, ಸೋಲು ಕಂಡರೂ ಎಂದೂ ಕ್ಷೇತ್ರವನ್ನು ಬಿಡಲಿಲ್ಲ. ದ್ವಾರಕೀಶ ಅಗಲಿಕೆ ಕನ್ನಡ ಚಿತ್ರರಂಗ ಹಾಗೂ ಕನ್ನಡ ನಾಡಿಗೆ ದೊಡ್ಡ ಹಿನ್ನಡೆಯಾಗಿದೆ. ವೈಯಕ್ತಿಕವಾಗಿ ನನಗೆ ಬಹಳ ದುಖಃವಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.