ಜ.21ರಂದು ಸಾರಿಗೆ ವ್ಯತ್ಯಯ

Published on

ಹಾವೇರಿ: ಬೆಳಗಾವಿಯಲ್ಲಿ ಆಯೋಜಿಸಿರುವ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮಕ್ಕೆ ಜ.21ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಿಂದ 125 ವಾಹನಗಳನ್ನು ಪೂರೈಸಲಾಗುತ್ತಿದೆ. ಹಾಗಾಗಿ, ಮಂಗಳವಾರ ವಿವಿಧ ಮಾರ್ಗಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಸಂಸ್ಥೆಯೊಂದಿಗೆ ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net