ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Published on

ಹಾವೇರಿ: ಬ್ಯಾಡಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಐದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ 12 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಳೇ ತಹಸೀಲ್ದಾರ್ ಕಚೇರಿ, ಕಾಕೋಳ ರಸ್ತೆ, ಬ್ಯಾಡಗಿ ಈ ವಿಳಾಸದಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಏ.24ರ ಸಂಜೆ 5.30ರ ಒಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಳೇ ತಹಸೀಲ್ದಾರ್ ಕಚೇರಿ, ಕಾಕೋಳ ರಸ್ತೆ, ಬ್ಯಾಡಗಿ-581106 ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net