ಬ್ಯಾಡಗಿಯಲ್ಲಿ ಕಬಡ್ಡಿ ಪಂದ್ಯಾವಳಿ ಅ.16ರಂದು

Published on

ಹಾವೇರಿ: ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ವತಿಯಿಂದ ಎಚ್.ಐ.ವಿ/ಏಡ್ಸ್ ಅರಿವಿನ ಮಾಸಾಚರಣೆ-2024ರ ನಿಮಿತ್ತ ಪದವಿ ಕಾಲೇಜು ವಿದ್ಯಾರ್ಥಿಗಳಲ್ಲಿ ಎಚ್.ಐ.ವಿ/ಏಡ್ಸ್ ಬಗ್ಗೆ ಅರಿವು ಮೂಡಿಸಲು ಆಹ್ವಾನಿತ ಅಂತರ್ ಪದವಿ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾವಳಿ ಅ.16ರಂದು ಬೆಳಗ್ಗೆ 10 ಗಂಟೆಗೆ ಬ್ಯಾಡಗಿ ಬಿ.ಇ.ಎಂ.ಎಸ್ ಕಾಲೇಜು ಆವರಣದಲ್ಲಿ ಜರುಗಲಿದೆ.
ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಶನ್ ಬ್ಯಾಡಗಿ ಮತ್ತು ಬ್ಯಾಡಗಿ ವರ್ತಕರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net