

ಬ್ಯಾಡಗಿ: ತಾಲೂಕಿನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜು.10ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಠದ ಅಹಲ್ಯಾಬಾಯಿ ಹೋಳ್ಕರ್ ಸಭಾಭವನದಲ್ಲಿ ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಯವರ 19ನೇ ಪುಣ್ಯಾರಾಧನೆ ಮತ್ತು ಶ್ರೀ ಗುರುಪೂರ್ಣಿಮಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಗಾಜಿಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.