ಶಿವಾನಂದ ಪಾಟೀಲ ಮಾ.13ರಂದು ಬ್ಯಾಡಗಿಗೆ

Published on

ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಮಾ.13ರಂದು ಬೆಳಗ್ಗೆ 10 ಗಂಟೆಗೆ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಲಿದ್ದಾರೆ.
ಗಲಭೆ ನಡೆದ ಸ್ಥಳ ಪರಿಶೀಲಿಸಿ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬ್ಯಾಡಗಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net