ಬ್ಯಾಡಗಿ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ 17ರಂದು

Published on

ಹಾವೇರಿ: ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಅ.17ರಂದು ಬ್ಯಾಡಗಿ ತಹಸೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜರುಗಲಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕೌಂಟರ್‌ಗಳಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‌ಎಸ್) ತಂತ್ರಾಂಶದಲ್ಲಿ ದಾಖಲಿಸಿಕೊಂಡು ಸ್ವೀಕೃತಿ ಪಡೆದುಕೊಳ್ಳಬೇಕು. ಸ್ವೀಕೃತಿಗೊಂಡ ಅರ್ಜಿಗಳನ್ನು ಪರಿಶೀಲಿಸಿ ಕುಂದುಕೊರತೆಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net