ಹಾವೇರಿ: ಉಪಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ನ.23ರಂದು ಜಿಲ್ಲೆಯಾದ್ಯಂತ ಹಾಗೂ ನ.24ರಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಾದ್ಯಂತ ಮದ್ಯ ಮಾರಾಟ ಮತ್ತು ಮದ್ಯಪಾನ ನಿಷೇಧಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನ.23ರ ಬೆಳಗ್ಗೆ 6 ಗಂಟೆಯಿಂದ ನ.24ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧ ಮಾಡಲಾಗಿದೆ. ನ.24ರ ಬೆಳಗ್ಗೆ 6 ಗಂಟೆಯಿಂದ ನ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.