ವಿವಿಧ ಕೌಶಲಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ ಅಕ್ಟೋಬರ್‌ನಲ್ಲಿ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ಹಾಗೂ ನವೆಂಬರ್‌ನಲ್ಲಿ ಮೊಬೈಲ್‌ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಹಾಗೂ ಜೆಸಿಬಿ ಚಾಲನೆ ಉಚಿತ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಅ.18ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net