ವಿವಿಧ ಕೌಶಲ್ಯ ಆಧಾರಿತ ತರಬೇತಿ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್‌ನಲ್ಲಿ ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್‌ವರ್ಕಿಂಗ್, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತ ಉಚಿತ ತರಬೇತಿಗೆ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಊಟ ಹಾಗೂ ವಸತಿಯೊಂದಿಗೆ ಶಿಬಿರ ಉಚಿತವಾಗಿ ಇರಲಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸದಲ್ಲಿ ಸಂಪರ್ಕಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net