ಹಾವೇರಿ: ನಗರದ ದಿ ಕಾರ್ಡಮಮ್ ಕೋ-ಆಪರೇಟಿವ್ ಬ್ಯಾಂಕ್‌ನ 2025-30 ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗಂಗಾಧರ ಮಳಗಿ ಹಾಗೂ ಉಪಾಧ್ಯಕ್ಷರಾಗಿ ಮಹಾಂತಪ್ಪ ಮಾಸೂರ ಅವಿರೋಧವಾಗಿ ಆಯ್ಕೆಯಾದರು.
ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗಾಗಿ ಡಿ.29ರಂದು ಚುನಾವಣೆ ನಡೆದಿತ್ತು. ಮುಂದಿನ ಐದು ವರ್ಷಗಳ ಅವಧಿಗೆ 13 ನಿರ್ದೇಶಕರನ್ನು ಆಯ್ಕೆ ಮಾಡಲಾಗಿತ್ತು. ಗಂಗಾಧರ ಮಳಗಿ ಎರಡನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಜಿ.ಸುಣಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.