ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Published on

ಹಾವೇರಿ: ನವದೆಹಲಿ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಸಿ)ಯಿಂದ 10 ಮತ್ತು 12ನೇ ತರಗತಿವರೆಗಿನ ಪರೀಕ್ಷೆಗಳು ಜಿಲ್ಲೆಯ ಆರು ಶಾಲೆಗಳಲ್ಲಿ ಫೆ.15ರಿಂದ ಆರಂಭವಾಗಿದ್ದು, ಏಪ್ರಿಲ್ 4ರವರೆಗೆ ನಡೆಯಲಿವೆ.

ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶಿಸಿದ್ದಾರೆ. ಈ ನಿರ್ಬಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳು:

ಹಾವೇರಿ ನಗರದ ಕೆ.ಎಲ್.ಇ. ಸೊಸೈಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್, ರಾಣೆಬೆನ್ನೂರ ನಗರದ ಓಂ ನಾಷನಲ್ ಪಬ್ಲಿಕ್ ಸ್ಕೂಲ್, ನಿಟ್ಟೂರ ಸೆಂಟ್ರಲ್ ಸ್ಕೂಲ್, ಕುಮಾರಪಟ್ಟಣಂನ ಆದಿತ್ಯ ಬಿರ್ಲಾ ಪಬ್ಲಿಕ್ ಸ್ಕೂಲ್ ಹಾಗೂ ಹಾನಗಲ್ಲ ತಾಲೂಕು ಮಹಾರಾಜಪೇಟೆ ಜವಾಹರ ನವೋದಯ ವಿದ್ಯಾಲಯದಲ್ಲಿ ಪರೀಕ್ಷೆಗಳು ನಡೆಯುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net