

ಹಾವೇರಿ: ಕೇಂದ್ರ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಜು.5ರಂದು ಸವಣೂರ ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಸವಣೂರ ತಾಲೂಕು ಚಳ್ಳಾಳಕ್ಕೆ ಆಗಮಿಸಿ, ಕೇಂದ್ರ ಸರ್ಕಾರದ ಆರೋಗ್ಯ ಮಿಷನ್ ಯೋಜನೆಯಲ್ಲಿ ನಿರ್ಮಿಸಿದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸವಣೂರಿನಲ್ಲಿ ಹಾಗೂ ಮಧ್ಯಾಹ್ನ 2 ಗಂಟೆಗೆ ಶಿಗ್ಗಾಂವಿಯಲ್ಲಿ ಕೇಂದ್ರ ಪುರಸ್ಕೃತ ಅಮೃತ ಯೋಜನೆ-2 ಯೋಜನೆಯ ಕುಡಿಯುವ ನೀರು ಸರಬರಾಜು ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಶಿಗ್ಗಾಂವಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಮತ್ತು ಅಮೃತ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.