

ಹಾವೇರಿ: ಚಂದ್ರಯಾನ- 3 ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆದ ಹಿನ್ನೆಲೆಯಲ್ಲಿ ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ತ್ರಿವರ್ಣ ಧ್ವಜ ಪ್ರದರ್ಶಿಸಿ, ಜನರಿಗೆ ಸಿಹಿ ವಿತರಿಸಿದರು. ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಕೆ.ಶಿವಲಿಂಗಪ್ಪ, ಪ್ರದೀಪ ಮಳ್ಳೂರ, ಕರಬಸಪ್ಪ ಹಳದೂರ, ಇತರರಿದ್ದರು.