ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಪ್ರಸಕ್ತ 2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ, ವಕ್ತಿ ಹಾಗೂ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬೇಕು. ಜ.24ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net