ಚೆಕ್‌ಪೋಸ್ಟ್, ಮತಗಟ್ಟೆಗಳಿಗೆ ಡಿಸಿ ಭೇಟಿ, ಪರಿಶೀಲನೆ

26 HVR 2 A
Published on

ಹಾವೇರಿ: ಲೋಕಸಭಾ ಚುನಾವಣೆ ವ್ಯಾಪ್ತಿಯ ವಿವಿಧ ಮತಗಟ್ಟೆಗಳು ಹಾಗೂ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬ್ಯಾಡಗಿ ತಾಲೂಕು ಕುಮ್ಮೂರ, ಹಿರೇಕೆರೂರ ತಾಲೂಕು ಜಾವಳ್ಳಿ ಹಾಗೂ ಹುಲಬಿಕೊಂಡ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಕಾರ್ಯ ನಿರ್ವಹಣೆ ಕುರಿತಾಗಿ ಪರಿಶೀಲನೆ ನಡೆಸಿದರು. ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಅಧಿಕಾರಿಗಳು ಹಾಗೂ ಎಫ್.ಎಸ್.ಟಿ ತಂಡದೊಂದಿಗೆ ಚರ್ಚಿಸಿ, ಕಾರ್ಯ ನಿರ್ವಹಣೆ ಕುರಿತಂತೆ ಸಲಹೆ ನೀಡಿದರು.
ಹಿರೇಕೆರೂರ ತಾಲೂಕು ಆಲದಗೇರಿ ಗ್ರಾಮದ ಮತ್ತು ರಟ್ಟಿಹಳ್ಳಿ ಪಟ್ಟಣದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಸ್ಥಳೀಯ ಮತದಾರರೊಂದಿಗೆ ಚರ್ಚಿಸಿದರು. ಮತಗಟ್ಟೆಗಳ ಮೂಲ ಸೌಲಭ್ಯಗಳ ಕುರಿತು ವೀಕ್ಷಿಸಿ ಅಲ್ಲಿನ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು, ಬಿಎಲ್‌ಒಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net