ಜೂ.7ರಂದು ಹಾವೇರಿ ನಗರ, ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Power Cut
Published on

ಹಾವೇರಿ: ಹಾವೇರಿ 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.7ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ, 110 ಕೆ.ವಿ. ಹಾವೇರಿ, 33 ಕೆ.ವಿ. ಕೆರಿಮತ್ತಿಹಳ್ಳಿ ಹಾಗೂ ಗಾಂಧಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆ.ವಿ.ಫೀಡರ್‌ಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಸಂಪೂರ್ಣ ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿ ಯಲ್ಲಾಪುರ, ನಾಗನೂರ, ಕೋಳೂರು, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ಹೋಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೆರಿಮತ್ತಿಹಳ್ಳಿ, ಸಂಗೂರ, ತೋಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ.ಆಫೀಸ್, ಕುರುಬಗೋಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೇನೂರು, ಕಲ್ಲಾಪುರ, ಹೊಸೂರು ಹಾಗೂ ಈ ಫೀಡರ್ ವ್ಯಾಪ್ತಿಗೆ ಬರುವ ಎಲ್ಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net