ಹಾವೇರಿ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಭೆ ಜ.12ರಂದು

Published on

ಹಾವೇರಿ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜ.12ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಗುತ್ತಿಗೆದಾರರ ಸಮಸ್ಯೆಗಳು ಹಾಗೂ ಸಂಘಟನೆ ಕುರಿತು ಚರ್ಚಿಸಲು ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘದ ಸಭೆ ಆಯೋಜಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಸಮಿತಿ ನಿರ್ದೇಶಕರಾದ ಲಿಂಗರಾಜ ಚಪ್ಪರದಹಳ್ಳಿ ಹಾಗೂ ಸಂಜೀವಕುಮಾರ ನೀರಲಗಿ ಭಾಗವಹಿಸಲಿದ್ದಾರೆ. ಹಾಗಾಗಿ, ಜಿಲ್ಲೆಯ ಎಲ್ಲ ಗುತ್ತಿಗೆದಾರರು ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷ ಎಸ್.ಆರ್.ಬಳ್ಳಾರಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net