ವಿಧಾನಸೌಧದಲ್ಲಿ ಸಿ.ಎಂ. ಜನತಾದರ್ಶನ ಇಂದು; ಎಲ್ಲ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರುವಂತೆ ಡಿಸಿ ಸೂಚನೆ

Published on

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.8ರಂದು ಬೆಂಗಳೂರಿನ ವಿಧಾನಸೌಧದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಬೇಕು. ಮುಖ್ಯಮಂತ್ರಿಯವರ ಕಚೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ ಹಾಗೂ ವಿ.ಸಿ.ಯಲ್ಲಿ ಭಾಗವಹಿಸಿ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದ್ದಾರೆ.
ರಾಜ್ಯದ ವಿವಿಧ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಹಾಗೂ ವಿ.ಸಿ. ಮೂಲಕ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ. ಹಾಗಾಗಿ, ಎಲ್ಲರೂ ಭಾಗವಹಿಸಿ ಅಹವಾಲುಗಳಿಗೆ ಸಕಾರತ್ಮಾಕವಾಗಿ ಸ್ಪಂದಿಸುವಂತೆ ಹಾಗೂ ಸ್ವೀಕೃತಿಯಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಡಿಸಿ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net