

ಹಾವೇರಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಾವೇರಿ ಜಿಲ್ಲೆಯ ಸಚಿವರು ಮತ್ತು ಶಾಸಕರ ಜತೆ ಆಯಾ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಮತ್ತು ಲೋಕಸಭಾ ಚುನಾವಣೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣವರ, ಸಲೀಂ ಅಹ್ಮದ್, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಇತರರಿದ್ದರು.