ಸಿಎಂ ಸಿದ್ದರಾಮಯ್ಯ ಹಾವೇರಿಗೆ 25ರಂದು

CM Siddaramayya
Published on

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಆದ ಬಳಿಕ ಜು.25ರಂದು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯಿಂದಲೇ ಮೊದಲ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ಆರಂಭಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಗಂಭೀರ ಸಮಸ್ಯೆಗಳು ಚರ್ಚೆಯಾಗಲಿವೆ. ಸಭೆ ಹೊರತುಪಡಿಸಿ ಸಿಎಂ ವೇಳಾಪಟ್ಟಿಯಲ್ಲಿ ಯಾವುದೇ ಕಾರ್ಯಕ್ರಮಗಳು ಪೂರ್ವನಿಗಧಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net