ಹಾವೇರಿ: ನಗರಸಭೆ ವಿಶೇಷ ಸಾಧಾರಣ ಸಭೆ ಅ.29ರಂದು ಬೆಳಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಜರುಗಲಿದೆ. ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ನಗರಸಭೆ ಆಯುಕ್ತ ಎಚ್.ಕಾಂತರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.