ರಾಜಕಾಲುವೆ ನಿರ್ಮಾಣಕ್ಕೆ ಭೂಮಿಪೂಜೆ

6 HVR 11
Published on

ಹಾವೇರಿ: ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರುದ್ರಪ್ಪ ಲಮಾಣಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಅಶ್ವಿನಿ ನಗರದ ಒಂದನೇ ಕ್ರಾಸ್ ಬಳಿ ಇರುವ ಸಾಯಿಬಾಬಾ ಗುಡಿ ಹಿಂಭಾಗದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಲೋಡಾಯ ಆಸ್ಪತ್ರೆಯಿಂದ ಹಾನಗಲ್ಲ ರಸ್ತೆವರೆಗೆ ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 2025-26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹೆಗ್ಗೇರಿ ರಸ್ತೆಯಲ್ಲಿನ ಒಂದು ಕಿ.ಮೀ ಡಾಂಬರೀಕರಣ ಹಾಗೂ ಎರಡು ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಬಳಿಕ ದೇವಗಿರಿ ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಹೊಸ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಗಣಜೂರ ಗ್ರಾಮದ ಹೊನ್ನಮ್ಮ ದೇವಿ ದೇವಸ್ಥಾನದ ಭೂಮಿಪೂಜೆ ನೆರವೇರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಆಶ್ರಯ ಸಮಿತಿ ಅಧ್ಯಕ್ಷ ಜಗದೀಶ ಬೆಟಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಎಂ.ಎಂ.ಖಾಜಿ, ನಗರಸಭೆ ಆಯುಕ್ತ ಎಚ್.ಕಾಂತರಾಜ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net