ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ; ಜಿಲ್ಲೆಯ ಶಾಸಕರ ಕೈತಪ್ಪಿದ ಸಚಿವ ಸ್ಥಾನ ಹಿನ್ನೆಲೆ

Published on

ಹಾವೇರಿ: ಜಿಲ್ಲೆಯ ಐವರು ಶಾಸಕರ ಪೈಕಿ ಒಬ್ಬೇ ಒಬ್ಬರನ್ನು ಸಚಿವ ಸ್ಥಾನಕ್ಕೆ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಲ್ಲಿ ಅಸಮಾಧಾನ ಉಂಟಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಕಾರ್ಯಕರ್ತರು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಬಹಳ ದೊಡ್ಡ ಮಟ್ಟದಲ್ಲಿ ಜಿಲ್ಲೆಯ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಹೀಗಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡದಿರುವುದು ಹಾಲಿ ಶಾಸಕರ, ಬೆಂಬಲಿಗರ ಹಾಗೂ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ.
ಹೈಕಮಾಂಡ್ ವಿರುದ್ಧ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ. ಬಂಜಾರ ಸಮಾಜದಿಂದ ಆಯ್ಕೆಯಾದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ಟಿಕೆಟ್ ತಪ್ಪಿದ್ದಕ್ಕೆ ಭಾರಿ ಅಸಮಾಧಾನ ಹೊರಹಾಕಿದ್ದಾರೆ. ಕೋಟ್:
ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ತುಂಬಾ ಬೇಸರ ಉಂಟು ಮಾಡಿದೆ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಆರರಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರಿಂದ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆ ಹುಸಿಯಾಗಿದ್ದರಿಂದ ನಮಗೆ ತೀವ್ರ ನೋವು ಉಂಟಾಗಿದೆ.
ಸಂಜಯಗಾಂಧಿ ಸಂಜೀವಣ್ಣವರ, ಕಾಂಗ್ರೆಸ್ ಮುಖಂಡ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net