ಹಾವೇರಿ: ಬುಧವಾರ ನಡೆದ ಹಾವೇರಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಗೈರಾಗುವ ಮೂಲಕ ಪಕ್ಷದ್ರೋಹ ಎಸಗಿರುವ ಆರು ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪರ ಮತ ಚಲಾಯಿಸದೇ, ಗೈರಾಗುವ ಮೂಲಕ ಪಕ್ಷಕ್ಕೆ ಅಗೌರವ ತೋರಿಸಿ, ಪಕ್ಷದ್ರೋಹ ಮಾಡಿರುವ ಸದಸ್ಯರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.