ಬಡಕುಟುಂಬಗಳ ನೆಮ್ಮದಿಗೆ ಗ್ಯಾರಂಟಿ ಶ್ರೀರಕ್ಷೆ; ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿಕೆ

15 HVR 8
Published on

ಹಾವೇರಿ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ದಿವಾಳಿ ಆಗುತ್ತಿದೆ ಎಂಬ ಆರೋಪ ಸಲ್ಲದು. ಬಡ ಕುಟುಂಬದ ನೆಮ್ಮದಿ ಜೀವನಕ್ಕೆ ಸಹಕಾರಿ ಆಗಿರುವುದನ್ನು ಬಹುತೇಕರು ಒಪ್ಪಿದ್ದಾರೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ನಗರದ ನವಚೇತನ ಮೈಕ್ರೋಫಿನ್ ಸರ್ವಿಸಸ್ ಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮತಯಾಚಿಸಿದರು. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ವರ್ಷ ಒಂದು ಲಕ್ಷ ರೂ. ಸಹಾಯಧನ ಒದಗಿಸುವ ಮಹಾಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ ಎಂದರು.
ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಬಡ ಹಾಗೂ ಮಧ್ಯಮ ವರ್ಗದ ಜನರ ಏಳ್ಗೆ ಬಯಸುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಿ ಹಾರೈಸಬೇಕು ಎಂದರು.
ಮೈಕ್ರೋ ಫೈನಾನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ನಾಗೇಂದ್ರ ಮಾಳಿ ಮಾತನಾಡಿ, ನಮ್ಮ ಬ್ಯಾಂಕ್ ಮೂಲಕ ನೀಡುತ್ತಿರುವ ಕಿರುಸಾಲ ಪಾವತಿಸಲು ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಂ.ಹಿರೇಮಠ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಪ್ರಭುಗೌಡ ಬಿಷ್ಟನಗೌಡ್ರ, ಆನಂದಪ್ಪ ಅಕ್ಕೂರ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net