ಕಾಂಗ್ರೆಸ್‌ನಲ್ಲಿ ಬಣಗಳಿಲ್ಲ, ಇದು ಬಿಜೆಪಿ ಸೃಷ್ಟಿ

HK Patil
Published on

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ನಾವು ಕುಳಿತು ಮಾತಾಡಿದ್ದೇವೆ. ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಬಿಸಿ ಆಗಿದ್ದೇವೆ. ಕಾಂಗ್ರೇಸ್ ಪಕ್ಷದಲ್ಲಿ ಬಣಗಳಿಲ್ಲ. ಇದು ಬಿಜೆಪಿಯೇ ಸೃಷ್ಟಿ ಮಾಡಿರುವುದು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ನಗರದಲ್ಲಿ ಶನಿವಾರ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆಯ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜಿವಾಲಾ ಅವರ ಎರಡೂವರೆ ವರ್ಷದ ಬಳಿಕ ಸಿಎಂ ಬದಲು ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಶಿಸ್ತಿಗಾಗಿ ಅವರು ಮಾತಾಡಿದ್ದಾರೆ ವಿನಃ ಬೇರೆ ಯಾವುದುಕ್ಕೂ ಅಲ್ಲ ಎಂದರು.
ಕಾಂಗ್ರೆಸ್ ಪಕ್ಷ ಬಲಶಾಲಿಯಾಗಿದೆ. ಒಗ್ಗಟ್ಟಿನ ಮಂತ್ರದಿಂದ ರಾಜ್ಯದಲ್ಲಿ ಈ ಬಾರಿ 25ಕ್ಕೂ ಹೆಚ್ಚು ಸಂಸದರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಲಿದ್ದಾರೆ. ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲಿದೆ. ಈ ಮೂಲಕ ಜನರು ಈ ಭಾರಿ ಬಿಜೆಪಿಗೆ ಶಾಸ್ತಿ ಮಾಡಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net