ಕಾಂಗ್ರೆಸ್ ವೀಕ್ಷಕರ ಸಭೆ ಅ.21ರಂದು; ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೇತೃತ್ವ

congress logo
Published on

ಹಾವೇರಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ಅ.21ರಂದು ಮಧ್ಯಾಹ್ನ 3 ಗಂಟೆಗೆ ನಗರದ ಸಜ್ಜನರ ಫಂಕ್ಷನ್ ಹಾಲ್‌ನಲ್ಲಿ ಚುನಾವಣಾ ವೀಕ್ಷಕರ ಸಭೆ ಆಯೋಜಿಸಲಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಭೆ ಜರುಗಲಿದೆ. ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಎಚ್.ಕೆ.ಪಾಟೀಲ, ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ಗದಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ, ಸೇರಿದಂತೆ ಪಕ್ಷದ ಜಿಲ್ಲಾ ಮಟ್ಟದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net