ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಆಯ್ಕೆ

Neeralagi
Published on

ಹಾವೇರಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಾವೇರಿ ನಗರಸಭೆ ಸದಸ್ಯ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆಯ್ಕೆಯಾಗಿದ್ದಾರೆ.
ಎಂ.ಎಂ.ಹಿರೇಮಠ ಅವರ ಸ್ಥಾನಕ್ಕೆ ನೀರಲಗಿ ಆಯ್ಕೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಆದೇಶ ಹೊರಡಿಸಿದ್ದಾರೆ.
ನೀರಲಗಿ ಅವರು 25 ವರ್ಷದಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾವೇರಿ ನಗರ ಆಶ್ರಯ ಕಮಿಟಿ ಅಧ್ಯಕ್ಷರಾಗಿ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿಯಾಗಿ, 10 ವರ್ಷಗಳ ಕಾಲ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಹಾವೇರಿ ನಗರಸಭೆ ಅಧ್ಯಕ್ಷರಾಗಿ, ಕಳೆದ 7 ವರ್ಷದಿಂದ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಹಾವೇರಿ ನಗರಸಭೆ ಸದಸ್ಯರಾಗಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಿರೇಮಠ :
ಜಿಲ್ಲಾಧ್ಯಕ್ಷರಾಗಿದ್ದ ಎಂ.ಎಂ.ಹಿರೇಮಠ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net