ಆಪ್ತ ಸಮಾಲೋಚಕರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published on

ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮಡಿ ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಗೆ ಮೆರಿಟ್ ಆಧಾರದ ಮೇಲೆ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಜ.9ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾಡಳಿತ ಭವನ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net