ಲೋಕ ಅದಾಲತ್‌ನಲ್ಲಿ 54,499 ಪ್ರಕರಣಗಳ ಇತ್ಯರ್ಥ; ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್. ಮಾಹಿತಿ

Published on

ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಆಯ್ಕೆ ಮಾಡಿಕೊಂಡಿದ್ದ 74,641 ಪ್ರಕರಣಗಳಲ್ಲಿ 54,499 ಪ್ರಕರಣಗಳು ಇತ್ಯರ್ಥಗೊಂಡಿವೆ. 45,29,77,138 ರೂ. ಮೊತ್ತದ ರಾಜೀಯಾಗಿದೆ ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪ ಎನ್. ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 7,170 ಪ್ರಕರಣಗಳ ಪೈಕಿ 5,782 ಪ್ರಕರಣಗಳು ಇತ್ಯರ್ಥಗೊಂಡಿವೆ. 27,59,91,069 ರೂ. ಮೌಲ್ಯದ ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 67,471 ಪ್ರಕರಣಗಳಲ್ಲಿ 48,717 ಪ್ರಕರಣಗಳು ಇತ್ಯರ್ಥಗೊಂಡಿದ್ದು, 17,69,86,069 ರೂ. ಮೊತ್ತದ ರಾಜೀಯಾಗಿದೆ.

ಜಿಲ್ಲಾ ವಕೀಲರ ಸಂಘ, ಜಿಲ್ಲೆಯ ಎಲ್ಲ ತಾಲೂಕು ವಕೀಲರ ಸಂಘ, ಹಾವೇರಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು, ಇತರೆ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ಜರುಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಒಂದಾದ ಏಳು ದಂಪತಿ

ಏಳು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀ ಮಾಡಿಕೊಂಡಿದ್ದಾರೆ. ಹಾವೇರಿ ಹಾಗೂ ರಾಣೆಬೆನ್ನೂರ ನ್ಯಾಯಾಲಯದಲ್ಲಿ ತಲಾ ಎರಡು, ಹಾನಗಲ್ಲ, ಶಿಗ್ಗಾಂವಿ ಹಾಗೂ ಸವಣೂರ ನ್ಯಾಯಾಲಯದಲ್ಲಿ ತಲಾ ಒಂದು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀ ಮಾಡಿಕೊಂಡು ಮತ್ತೆ ಒಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net