ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಕ್ಷೇಪಣೆ ಸಲ್ಲಿಕೆಗೆ ಆಗಸ್ಟ್ 25ರವರೆಗೆ ಅವಕಾಶ

Published on

ಹಾವೇರಿ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ವಿಸ್ತರಿಸಿ ಆಗಸ್ಟ್ 25ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.
ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ಬೆಳೆ ಸಮೀಕ್ಷೆ ದತ್ತಾಂಶವನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಮಿಸ್‌ಮ್ಯಾಚ್ ಪ್ರಕರಣಗಳ ಇತ್ಯರ್ಥ, ಬೆಂಬಲ ಬೆಲೆಯಡಿ ರೈತರು ಮಾರಾಟ ಮಾಡಲು ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ಬಳಕೆ ಮಾಡುವುದರಿಂದ ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೇ ಇದರಲ್ಲಿ ಪಾಲ್ಗೊಂಡು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ ಆಕ್ಷೇಪಣೆಗಳನ್ನು ಆ.25ರೊಳಗೆ ಸಲ್ಲಿಸಲು ಅವಕಾಶವಿದೆ. ನಂತರದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net