

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶೋಷಿತರ ಅಭಿವೃದ್ಧಿಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ.20ರಂದು ಬೆಳಗ್ಗೆ 11 ಗಂಟೆಗೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ಜರುಗಲಿದೆ.
ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನ ಆವರಣದಿಂದ ವಿವಿಧ ಕಲಾ ತಂಡಗಳೊಂದಿಗೆ ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ಹೊರಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮಾಜಿ ಮುಖ್ಯಮಂತ್ರಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ, ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.