ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್; ಡಿ.ಎಸ್. ಮಾಳಗಿ

8 HVR 6
Published on

ಹಾವೇರಿ: ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ದೇಶದಲ್ಲಿ ಆಹಾರ ಧಾನ್ಯದ ಕೊರತೆ ಉಂಟಾಗಿದ್ದ ಸಂದರ್ಭದಲ್ಲಿ ಅತಿದೊಡ್ಡ ಬದಲಾವಣೆ ತರುವ ಮೂಲಕ ಹಸಿರು ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಲಿಡಕರ ನಿಗಮ ಮಂಡಳಿಯ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಸ್ಮರಿಸಿದರು.
ದಲಿತ ಒಕ್ಕೂಟದ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 37ನೇ ಪುಣ್ಯಸ್ಮರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತ ಇಂದು ಆಹಾರ ಧಾನ್ಯಗಳಲ್ಲಿ ಸ್ವಾವಲಂಬನೆ ಸಾಧಿಸಿರುವುದಕ್ಕೆ ಡಾ.ಬಾಬು ಜಗಜೀವನರಾಮ್ ಅವರು ಹಾಕಿಕೊಟ್ಟ ಮಾರ್ಗಗಳೇ ಕಾರಣ. ರಕ್ಷಣಾ ಮತ್ತು ಕೃಷಿ ಸಚಿವರಾಗಿ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಜಗಜೀವನರಾಮ್ ಅವರು ಶೋಷಿತ ಸಮಾಜಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳು ಜನಿಸದೇ ಹೋಗಿದ್ದರೆ ಶೋಷಿತರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಿರಲಿಲ್ಲ. ಅವರು ಶೋಷಿತ ಸಮಾಜದ ಏಳ್ಗೆಯೊಂದಿಗೆ ಅಸಮಾನತೆ ಹೊಗಲಾಡಿಸಲು ಶ್ರಮಿಸಿದ್ದಾರೆ ಎಂದರು.
ಈ ವೇಳೆ ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಡಿವಾಳರ, ಜಿಪಂ ಮಾಜಿ ಸದಸ್ಯ ಕೃಷ್ಣ ಸುಣಗಾರ, ಸಚಿನ್ ಮರಿಯಣ್ಣನವರ, ನಿರಂಜನ ಬಳೆಗಾರ, ನವೀನ ಮಲಗೋಡ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net