ಹಾವೇರಿ: ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 220 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಅ.11ರಂದು ಮಹಾನವಮಿ/ಆಯುಧ ಪೂಜೆ, ಅ.12ರಂದು ವಿಜಯ ದಶಮಿ ಹಬ್ಬ ಹಾಗೂ ಅ.13ರಂದು ಭಾನುವಾರ ರಜಾದಿನ ಇರುವ ಕಾರಣ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ಸೌಕರ್ಯ ಒದಗಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.