ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 6ರಿಂದ

Published on

ಹಾವೇರಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.6 ಮತ್ತು 7ರಂದು ನಗರದಲ್ಲಿ ಜರುಗಲಿದ್ದು, ಆನ್‌ಲೈನ್‌ನಲ್ಲಿ ನೋಂದಣಿ ಮಾಡಿದ ಕ್ರೀಡಾಪಟುಗಳಿಗೆ ಮಾತ್ರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆನ್‌ಲೈನ್ ಠಿಠಿ://ಚ್ಟಚ್ಚಞ್ಚ್ಠ2025.ಛಿಠ್ಟಿಜ್ಞಿಜಿ.್ಚಟಞ/ಓಅಟ್ಟಠಿ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಸೆ.6ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷ ಹಾಗೂ ಮಳೆಯರಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೆಟ್‌ಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಬ್ಯಾಡ್ಮಿಂಟನ್, ಒಳಾಂಗಣ ಕ್ರೀಡಾಂಗಣದಲ್ಲಿ ಯೋಗ ಹಾಗೂ ಲಯನ್ಸ್ ಪ್ರೌಢಶಾಲೆಯಲ್ಲಿ ಪುರುಷರಿಗೆ ಫುಟ್‌ಬಾಲ್ ಕ್ರೀಡೆಗಳು ಜರುಗಲಿವೆ.

ಸೆ.7ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷ ಹಾಗೂ ಮಳೆಯರಿಗೆ ಅಥ್ಲೆಟಿಕ್ಸ್, ಖೋಖೋ, ಕಬಡ್ಡಿ, ಹಾಕಿ, ಒಳಾಂಗಣದಲ್ಲಿ ಕುಸ್ತಿ ಹಾಗೂ ಟೇಬಲ್ ಟೆನ್ನಿಸ್ ಕ್ರೀಡೆಗಳು ಜರುಗಲಿವೆ. ಜಿಲ್ಲಾ ಕ್ರೀಡಾಂಗಣದಲ್ಲಿ ಟೆನ್ನಿಸ್ ಹಾಗೂ ನೆಟ್‌ಬಾಲ್ ಹಾಗೂ ರಾಣೆಬೆನ್ನೂರ ತಾಲೂಕು ಕ್ರೀಡಾಂಗಣದಲ್ಲಿ ಈಜು ಕ್ರೀಡೆಗಳ ಆಯ್ಕೆ ಜರುಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net