ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ 15ರಂದು

Published on

ಹಾವೇರಿ: ಜಿಲ್ಲಾಡಳಿತದಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಆ.15ರಂದು ಬೆಳಗ್ಗೆ 9 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.

ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಬಸವರಾಜ ಶಿವಣ್ಣನವರ, ಪ್ರೊ.ಎಸ್.ವಿ.ಸಂಕನೂರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ ಖಾದ್ರಿ, ಎಸ್.ಆರ್.ಪಾಟೀಲ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹಾವೇರಿ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಇತರ ಗಣ್ಯರು ಭಾಗವಹಿಸುವರು.

ಕಾರ್ಯಕ್ರಮ ವಿವರ:

ಬೆಳಗ್ಗೆ 7.45 ಗಂಟೆಗೆ ಗಣ್ಯರು ಹುತಾತ್ಮ ಮೈಲಾರ ಮಹಾದೇವ ವೃತ್ತದಲ್ಲಿರುವ ಹುತಾತ್ಮ ಶ್ರೀ ಮೈಲಾರ ಮಹಾದೇವಪ್ಪನವರ ಪ್ರತಿಮೆಗೆ ಮಾರ್ಲಾಪಣೆ ಮಾಡುವರು. ಬೆಳಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ಬೆಳಗ್ಗೆ 9.5ಕ್ಕೆ ಪಥ ಪರಿವೀಕ್ಷಣೆ, 9.15ಕ್ಕೆ ಪಥ ಸಂಚಲನ, 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ ಕಾರ್ಯಕ್ರಮ ನಡೆಯಲಿದೆ. 10 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನಂತರ ಬಹುಮಾನ ವಿತರಣೆ ಜರುಗಲಿದೆ. ಸಂಜೆ 5.30ಕ್ಕೆ ನಗರದ ಜಿಲ್ಲಾ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net