ಬೆಳೆಹಾನಿ ಫಲಾನುಭವಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗೆ ರೈತರಿಗೆ ಅವಕಾಶ

Published on

ಹಾವೇರಿ: ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಪ್ರಕೃತಿ ವಿಕೋಪದಿಂದ ಅತಿವೃಷ್ಟಿ, ನಿರಂತರ ಮಳೆಯಿಂದ ಹಾವೇರಿ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರ ಪಾವತಿ ಕುರಿತಂತೆ ಬೆಳೆಹಾನಿಯಾದ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್, ಗ್ರಾಮ ಪಂಚಾಯಿತಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಕಚೇರಿಗಳಲ್ಲಿ ಸೆ.2ರೊಳಗೆ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಗಳಲ್ಲಿ ಏಳು ದಿನದೊಳಗಾಗಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net