

ಹಾವೇರಿ: ನಗರದ ಮೈಲಾರ ಮಹಾದೇವಪ್ಪ ವೃತ್ತದ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 2 ಹಾಗೂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪ್ರಾಥಮಿಕ ಶಾಲೆಗೆ ಶಾಲೆಯ ಹಳೆಯ ವಿದ್ಯಾರ್ಥಿ ದಿ.ಬಸವರಾಜ ಸಂಗೂರ ಇವರ ಸ್ಮರಣಾರ್ಥ ಅವರ ಪತ್ನಿ ನಿರ್ಮಲಾ ಸಂಗೂರ ಹಾಗೂ ಪುತ್ರ ಪ್ರಮೋದ ಸಂಗೂರ ಅವರು 1.40 ಲಕ್ಷ ರೂ. ಮೌಲ್ಯದ 35 ಡೆಸ್ಕ್‌ಗಳನ್ನು ಶಾಲೆಗೆ ದೇಣಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಎಸ್‌ಡಿಎಂಸಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಮಕ್ಕಳಿಂದ ವೇಷಭೂಷಣ ಸ್ಪರ್ಧೆ, ಭಾಷಣ ಸ್ಪರ್ಧೆ, ಹಾಗೂ ಕಲಾ ಕಾರಂಜಿ ಕಾರ್ಯಕ್ರಮಗಳು ನೆಡದವು.
ಮುಖ್ಯೋಪಾಧ್ಯಾಯ ಜೆ.ಎಂ.ಯಲವದಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭೆ ಸದಸ್ಯರು, ಶಿಕ್ಷಕರು, ಮಕ್ಕಳು ಪಾಲ್ಗೊಂಡಿದ್ದರು.