ಹಾವೇರಿ ಜಿಲ್ಲಾಡಳಿತದಿಂದ ನವೆಂಬರ್ 1ರಂದು 70ನೇ ಕನ್ನಡ ರಾಜ್ಯೋತ್ಸವ

Kannada
Published on

ಹಾವೇರಿ: ಜಿಲ್ಲಾಡಳಿತದಿಂದ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಧ್ವಜಾರೋಹಣ ನೆರವೇರಿಸುವರು. ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತರಿರುವರು. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಖಾದ್ರಿ, ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಸ್ಥಳೀಯ ಶಾಸಕರು, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮ ವಿವರ:

ನ.1ರಂದು ಬೆಳಗ್ಗೆ 7.45ಕ್ಕೆ ಹುತಾತ್ಮ ಮೈಲಾರ ಮಹದೇವ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ವಿವಿಧ ಇಲಾಖೆಗಳಿಂದ ನಿರ್ಮಿಸಿದ ಸ್ತಬ್ಧ ಚಿತ್ರಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಆರಂಭವಾಗುವುದು. 9 ಗಂಟೆಗೆ ಧ್ವಜಾರೋಹಣ, 9.10ಕ್ಕೆ ಪಥ ಪರಿವೀಕ್ಷಣೆ, 9.15ಕ್ಕೆ ಪಥ ಸಂಚಲನ, ಕನ್ನಡ ರಾಜ್ಯೋತ್ಸವ ಸಂದೇಶ, 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬಹುಮಾನ ವಿತರಣೆ ಹಾಗೂ ಸಂಜೆ 5.30ಕ್ಕೆ ಜಿಲ್ಲಾ ಗುರು ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net