ಕಾಲಮಿತಿಯೊಳಗೆ ಗುರಿ ಸಾಧನೆ ಮಾಡಿ

Published on

ಹಾವೇರಿ: ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡುವ ಮೂಲಕ ಗುರಿ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಅಧಿನಿಯಮ-2013ರ ಅನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ವಿಶೇಷ ಕಾಳಜಿ ವಹಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ, ಪಶು ಸಂಗೋಪನೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಗಳಡಿ ಸಾಧಿಸಿದ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಮಹ್ಮದ ಖೀಜರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ ಹೊಸಗೌಡ್ರ, ಡಿಡಿಪಿಐ ಸುರೇಶ ಹುಗ್ಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net