ಲಾಟರಿ, ಮಟ್ಕಾ ಹಾವಳಿ ಬಗ್ಗೆ ನಿಗಾ ವಹಿಸಿ; ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಸೂಚನೆ

22 HVR 8
Published on

ಹಾವೇರಿ: ಜಿಲ್ಲೆಯಲ್ಲಿ ಲಾಟರಿ ಹಾಗೂ ಮಟ್ಕಾ ಹಾವಳಿ ಕಂಡು ಬಂದಲ್ಲಿ ಕೂಡಲೇ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ನಿರ್ದೇಶನ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ 2024-25ನೇ ಸಾಲಿನ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಕುರಿತು ತ್ರೈಮಾಸಿಕ ಸಭೆ ನಡೆಸಿದ ಅವರು, ಲಾಟರಿ ಹಾಗೂ ಮಟ್ಕಾ ಹವಾಳಿ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ.ಶಿರಕೋಳ, ವಾಣಿಜ್ಯ ತೆರಿಗೆ ಜಾರಿ ವಿಭಾಗದ ಅಧಿಕಾರಿ ನಾಗೇಶ ಕೆ.ಚೌದರಿ, ಪಿಂಚಣಿ ಸಣ್ಣ ಉಳಿತಾಯ ಇಲಾಖೆ ಅಧಿಕಾರಿ ಸುರೇಶ ಎಸ್.ಎಂ., ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net