ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಪ್ಪಿಸಲು; ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Published on

ಹಾವೇರಿ: ರಾಜ್ಯದಲ್ಲಿ ಮೈಕ್ರೋ ಫನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ 08375-249102 ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಸಹಾಯವಾಣಿ ಕೇಂದ್ರವು 24/7 ಕಾರ್ಯನಿರ್ವಹಿಸಲಿದ್ದು, ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ, ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಹಾಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಒಟ್ಟು ಮೂರು ಪಾಳಯದಲ್ಲಿ ಕಾಯಣಿರ್ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ.

ಸಹಾಯವಾಣಿಗೆ ಬರುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಈ ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಸೀಲ್ದಾರರಿಗೆ ಮತ್ತು ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಸಹಾಯವಾಣಿ ಸಂಖ್ಯೆ ಮೇಲುಸ್ತುವಾರಿಗೆ ಅಧಿಕಾರಿ ನಿಯೋಜಿಸಲಾಗಿದೆ.

ಮೇಲುಸ್ತುವಾರಿ ಅಧಿಕಾರಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕರನ್ನು (ಮೊ.ಸಂ. 94817-25862) ನಿಯೋಜಿಸಲಾಗಿದೆ. ಸಹಾಯವಾಣಿ ಕೇಂದ್ರಕ್ಕೆ ಪ್ರತಿದಿನ ಬರುವ ದೂರುಗಳನ್ನು ಪರಾಮರ್ಷಿಸಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net