ಹಾವೇರಿ ನಗರಸಭೆಗೆ ಡಿಸಿ ಎಚ್ಚರಿಕೆ ನೋಟಿಸ್ !

Haveri 4
Published on

ಹಾವೇರಿ: ನೀರಿನ ಟ್ಯಾಂಕ್ ಸ್ವಚ್ಛತೆ ಕುರಿತು ‘ವಿಜಯವಾಣಿ’ ಪತ್ರಿಕೆಯಲ್ಲಿ ‘ಜಲಾಗಾರ ಜನಾರೋಗ್ಯಕ್ಕೆ ಸಂಚಕಾರ‘ ಶೀರ್ಷಿಕೆಯಡಿ ಆ.24ರಂದು ವಿಶೇಷ ವರದಿ ಪ್ರಕಟಗೊಂಡಿತ್ತು. ಈ ಕುರಿತು ತಾವು ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಈ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು 24 ಗಂಟೆಯೊಳಗೆ ಲಿಖಿತ ಹೇಳಿಕೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ರಘುನಂದನ ಮೂರ್ತಿ ಹಾವೇರಿ ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಅವರಿಗೆ ಶುಕ್ರವಾರ ಎಚ್ಚರಿಕೆ ನೋಟಿಸ್ ನೀಡಿದ್ದಾರೆ. ಆ.7ರಂದು ನಡೆದ ಸಭೆಯಲ್ಲಿ ನಗರಸಭೆ ವ್ಯಾಪ್ತಿಯ ಎಲ್ಲ ಕುಡಿಯುವ ನೀರಿನ ಪೈಪ್‌ಲೈನ್‌ಗಳನ್ನು ದುರಸ್ತಿ ಮಾಡಲು 48 ಗಂಟೆಗಳ ಗಡವು ನೀಡಲಾಗಿತ್ತು. ನೀರಿನ ಗುಣಮಟ್ಟದ ಪರೀಕ್ಷೆ ಮಾಡಲು ಸೂಚಿಸಲಾಗಿತ್ತು. ಈ ಬಗ್ಗೆಯೂ ತಾವು ಯಾವುದೇ ಕ್ರಮ ಜರುಗಿಸಿಲ್ಲ. ಈ ಕುರಿತು ನೋಟಿಸ್ ತಲುಪಿದ 24 ಗಂಟೆಯೊಳಗೆ ಖುದ್ದು ಹಾಜರಾಗಿ ಲಿಖಿತ ಹೇಳಿಕೆ ನೀಡಬೇಕು. ತಪ್ಪಿದಲ್ಲಿ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ನೋಟಿಸ್ ಮೂಲಕ ಡಿಸಿ ಎಚಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net