ಬಸವರಾಜ ಬೊಮ್ಮಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

15 HVR 2 A
Published on

ಹಾವೇರಿ: ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಬಿ.ಸಿ.ಪಾಟೀಲ, ಶಾಸಕ ಚಂದ್ರು ಲಮಾಣಿ, ವಿರುಪಾಕ್ಷಪ್ಪ ಬಳ್ಳಾರಿ, ಇತರರು ಸಾಥ್ ನೀಡಿದರು.
ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ. ಏಪ್ರಿಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ. ಅವತ್ತು ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಬೈರತಿ ಬಸವರಾಜ ಸೇರಿ ಹಲವು ನಾಯಕರು ಬರುತ್ತಾರೆ. ಇವತ್ತು ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸಿರುವೆ. ಅತಿ ಹೆಚ್ಚು ಮತಗಳ ಅಂತರಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ ಇದೆ ಎಂದು ಬೊಮ್ಮಾಯಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net