ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸಂತಶ್ರೇಷ್ಠ ಕನಕದಾಸರ ಜಯಂತಿ

18 HVR 9
Published on

ಹಾವೇರಿ: ಸಂತಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಹಾವೇರಿಯ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸಿದರು. ಶಿಗ್ಗಾಂವಿ ಉಪಚುನಾವಣೆಯ ನೀತಿಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ, ಉಪವಿಭಾಗಧಿಕಾರಿ ಎಚ್.ಬಿ.ಚನ್ನಪ್ಪ, ತಹಸೀಲ್ದಾರ್ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net