ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಏ.14ರಂದು

Published on

ಹಾವೇರಿ: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಏ.14ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ರೇಷ್ಮಾ ಕೌಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net